ಭಾರತ ತಂಡವು 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ 7 ರನ್ಗಳ ರೋಚಕ ಜಯದೊಂದಿಗೆ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕೆರಿಯರ್ಗೆ ಗುಡ್ ಬೈ ಹೇಳಿದ್ದಾರೆ.
ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಒಟ್ಟು 117 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 3056 ಎಸೆತಗಳನ್ನು ಎದುರಿಸಿ 4188 ರನ್ ಕಲೆಹಾಕಿದ್ದಾರೆ. ಇದರ ನಡುವೆ 38 ಅರ್ಧಶತಕ ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ.
ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಭಾರತದ ಇಬ್ಬರು ದಿಗ್ಗಜರ ಟಿ20 ಕೆರಿಯರ್ ಅಂತ್ಯವಾದಂತಾಗಿದೆ.
ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಒಟ್ಟು 159 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 151 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 3003 ಎಸೆತಗಳನ್ನು ಎದುರಿಸಿದ್ದ ಹಿಟ್ಮ್ಯಾನ್ 4231 ರನ್ ಕಲೆಹಾಕಿದ್ದಾರೆ. ಹಾಗೆಯೇ 5 ಭರ್ಜರಿ ಶತಕ ಹಾಗೂ 32 ಅರ್ಧಶತಕಗಳನ್ನು ಸಿಡಿಸಿದ್ದಾರೆ.