ಇನ್ಮುಂದೆ ಅಂಗನವಾಡಿಯಲ್ಲೇ LKG, UKG : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌


ಬೆಂಗಳೂರು : ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಸಿಎಂ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಉಳಿದ ಕಡೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚಿಸಿರುವುದಾಗಿ ಮಾಹಿತಿ ನೀಡಿದ್ದಾರೆ.


ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ಕಾರಣಕ್ಕೆ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸಿಎಂ ಸಹಮತ ವ್ಯಕ್ತಪಡಿಸಿದ್ದಾರೆ. ಇಲಾಖೆಯ ಮೂಲಕವೇ ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಬ್ಯಾಗ್‌ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮ ವಹಿಸಲಾಗುವುದು ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.