ಬೆಳ್ತಂಗಡಿ/ ಬಂಟ್ವಾಳ: ವ್ಯಾಪಕ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಆಯಾ ತಾಲ್ಲೂಕಿನ ತಹಶೀಲ್ದಾರ್ ಗುರುವಾರ (ಜು.4) ಘೋಷಣೆ ಮಾಡಿದ್ದಾರೆ..
ಬುಧವಾರ ರಾತ್ರಿ ಮತ್ತು ಗುರುವಾರ ಬೆಳಿಗ್ಗೆಯೂ ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು ನದಿ ಹಳ್ಳಗಳು ತುಂಬಿ ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್ಗಳು ಈಕ್ರಮ ಕೈಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.