KSRTC: ಪ್ರಯಾಣಿಕರ ಕಿರಿಕಿರಿಗಳಿಗೆ ಮುಕ್ತಿ ನೀಡಲು ಕೆ.ಎಸ್.ಆರ್ಟಿ.ಸಿ ಬಿಗ್‌ ಪ್ಲಾನ್‌ : ಹೊಸ ವ್ಯವಸ್ಥೆ ಜಾರಿ


ಬೆಂಗಳೂರು: ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್ಗಳ ಮಧ್ಯೆ ಚಿಲ್ಲರೆಗಾಗಿ ಯಾವಾಗಲೂ ಜಗಳ ನಡೆಯುತ್ತಲೇ ಇರುತ್ತದೆ. ಈ ರೀತಿಯ ಕಿರಿಕಿರಿಗಳಿಗೆ ಮುಕ್ತಿಹಾಡಲು ಕೆಎಸ್ಆರ್ಟಿಸಿ ಮುಂದಾಗಿದೆ. ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಕೆಎಸ್ಆರ್ಟಿಸಿ ಮುಂದಾಗಿದೆ.ಶೀಘ್ರದಲ್ಲೇ ಈ ವ್ಯವಸ್ಥೆ ಅನುಷ್ಠಾನಗೊಳ್ಳುವ ನಿರೀಕ್ಷೆ ಇದೆ.

ಖಾಸಗಿ ಕಂಪೆನಿಯಿಂದ ಒಂದು ಮಷಿನ್ಗೆ ಪ್ರತಿ ತಿಂಗಳು 645 ರೂಪಾಯಿ ಬಾಡಿಗೆ ಆಧಾರದಲ್ಲಿ 10245 ಸಾವಿರ ಇಟಿಎಂ ಟಿಕೆಟ್ ಮಷಿನ್ಗಳ ಖರೀದಿಗೆ ಕೆಎಸ್ಆರ್ಟಿಸಿ ಮುಂದಾಗಿದೆ. ಇದರಿಂದ ಇನ್ಮುಂದೆ ಕೆಎಸ್ಆರ್ಟಿಸಿ ಬಸ್ನಲ್ಲಿ ಗೂಗಲ್ ಪೇ, ಫೋನ್ ಪೇ. ಪೇಟಿಎಂ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ. ಈ ನೂತನ ಮಷಿನ್ಗಳಲ್ಲಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ಗಳನ್ನು ಬಳಸಿಯೂ ಹಣ ಪಾವತಿ ಮಾಡಬಹುದು.

ಪ್ರಯಾಣಿಕರ ಕಿರಿಕಿರಿಗಳಿಗೆ ಮುಕ್ತಿ ನೀಡಲು KSRTC ಬಿಗ್‌ ಪ್ಲಾನ್‌ : ಹೊಸ ವ್ಯವಸ್ಥೆ ಜಾರಿ