ಇಂದು ವಿವೋ T3 ಲೈಟ್‌ 5G ಮಾರಾಟ ಶುರು; ಅಗ್ಗದ ಬೆಲೆಗೆ ಸಖತ್‌ ಫೀಚರ್ಸ್‌!


VIVO: ಬಿನ್ನ ಶ್ರೇಣಿಯ ಸ್ಮಾರ್ಟ್‌ಫೊನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ವಿವೋ (Vivo) ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ವಿವೋ T3 ಲೈಟ್‌ 5G (vivo T3 Lite 5G) ಎಂಟ್ರಿ ಲೆವೆಲ್‌ ಪ್ರೈಸ್‌ಟ್ಯಾಗ್‌ನಲ್ಲಿ ಗ್ರಾಹಕರನ್ನು ಆಕರ್ಷಿಸಿದೆ. ಅಂದಹಾಗೆ ಈ ಮೊಬೈಲ್‌ ಇಂದು (ಜುಲೈ 11 ರಂದು) ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಮತ್ತೆ ಮಾರಾಟ ಪ್ರಾರಂಭ ಮಾಡಲಿದೆ.ಇನ್ನು ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದಿದೆ.

ಹೌದು, ವಿವೋ ಸಂಸ್ಥೆಯ ವಿವೋ T3 ಲೈಟ್‌ 5G (vivo T3 Lite 5G) ಮೊಬೈಲ್‌ ಇಂದು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಮತ್ತೆ ಸೇಲ್‌ ಶುರು ಮಾಡಲಿದೆ. ಈ ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಜೊತೆಗೆ ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಇನ್ನು ಈ ಮೊಬೈಲ್‌ನ ಆರಂಭಿಕ ವೇರಿಯಂಟ್‌ 4GB RAM + 128 GB ಆಯ್ಕೆಯಲ್ಲಿ ಇದೆ.

ಹಾಗೆಯೇ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 15W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಹೊಂದಿದೆ. ಅಲ್ಲದೇ ಗ್ರಾಹಕರು ಈ ಫೋನ್‌ ವೈಬ್ರೆಂಟ್‌ ಗ್ರೀನ್ ಮತ್ತು ಮೆಜೆಸ್ಟಿಕ್ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಈ ಫೋನ್‌ ಖರೀದಿಸಬಹುದು. ಇನ್ನುಳಿದಂತೆ ವಿವೋ T3 ಲೈಟ್‌ 5G ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ವಿವೋ T3 ಲೈಟ್‌ 5G - ಫೀಚರ್ಸ್‌ ಹೀಗಿವೆ

ವಿವೋ T3 ಲೈಟ್‌ 5G ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ 90Hz ರಿಫ್ರೆಶ್ ರೇಟ್‌ ಆಯ್ಕೆ ಒಳಗೊಂಡಿದ್ದು, ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಮಾಡುತ್ತದೆ.

ವಿವೋ T3 ಲೈಟ್‌ 5G ಫೋನ್‌ 4 GB RAM + 128 GB ಹಾಗೂ 6 GB RAM + 128 GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಹೊಂದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಸೌಲಭ್ಯ ನೀಡಲಾಗಿದೆ.

ವಿವೋ T3 ಲೈಟ್‌ 5G ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಸೈಡ್‌ ಮೌಂಟ್‌ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.


Tags