Muda scam : ಸಿಎಂ ವಿರುದ್ದ ಪ್ರಕರಣ - ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ರಾಷ್ಟ್ರಪತಿ!


ನವದೆಹಲಿ : ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ದಾಖಲಾಗಿರುವ ಪ್ರಾಸಿಕ್ಯೂಷನ್‌ ಗೆ ಸಂಬಂಧಿಸಿದಂತೆ ಗಮನ ಹರಿಸಬೇಕೆಂದು ಆದೇಶಿಸಿ ದೇಶದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯ ಕಾಂಗ್ರೆಸ್‌ ಮುಖಂಡ ರಮೇಶ್‌ ಬಾಬು ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮೂಡಾ ಹಗರಣದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವಿನ ಚಟುವಟಿಕೆಗಳ ಬಗ್ಗೆ ಪತ್ರ ಬರೆದಿದ್ದರು. ಈಗ ಆ ಪತ್ರಕ್ಕೆ ಪ್ರತಿಯಾಗಿ ದ್ರೌಪದಿ ಮುರ್ಮು ರಾಜ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. 

ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿಯಮಗಳನ್ನು ಉಲ್ಲಂಘಿಸಿ ಸಿಎಂ ಸಿದ್ದರಾಮಯ್ಯ ಈ ಹಿಂದೆ ಅಕ್ರಮವಾಗಿ ನಿವೇಶನಗಳನ್ನು ಪಡೆದಿದ್ದಾರೆಂದು ಬಿಜೆಪಿ ಆರೋಪಿಸಿತ್ತು. ಈ ಕುರಿತು ಮೂವರು ಪ್ರತ್ಯೇಕವಾಗಿ ಸಿಎಂ ವಿರುದ್ದ ದೂರು ಸಲ್ಲಿಸಿದ್ದರು. ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಆದೇಶ ನೀಡಿದ್ದರು. ಈ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಎಬ್ಬಿಸಿತ್ತು. 

ರಾಜ್ಯಪಾಲರ ನಡೆಯನ್ನು ವಿರೋಧಿಸಿ ಎಂದು ಕಾಂಗ್ರೆಸ್‌ ಚಲೋ ರಾಜಭವನ್‌ ಹಮ್ಮಿಕೊಂಡಿದ್ದು, ರಾಜಭವನಕ್ಕೆ ಮುತ್ತಿಗೆ ಹಾಕಲಿದೆ.