ನಿಯಮಗಳ ಪ್ರಕಾರ ಸರ್ಕಾರಿ-ಅರೆ ಸರ್ಕಾರಿ ನೌಕರರು ತೆರಿಗೆ ಪಾವತಿದಾರರು, 4 ಚಕ್ರದ ಬಿಳಿ ಬೋರ್ಡ್ ವಾಹನ ಹೊಂದಿದವರು, ಆದಾಯ ತೆರಿಗೆ ಪಾವತಿಸುವ ಕುಟುಂಬದವರು, ಒಂದೇ ಮನೆಯಲ್ಲಿ ವಾಸವಾಗಿದ್ದು, ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದವರು, 7.5 ಎಕರೆಗಿಂತ ಹೆಚ್ಚಿನ ಡಿ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿದವರು, ವಾರ್ಷಿಕ 1.20 ಲಕ್ಷ ರೂ. ಗಿಂತ ಹೆಚ್ಚು ಆದಾಯ ಹೊಂದಿದವರು, ನಗರ ಪ್ರದೇಶದಲ್ಲಿ 1 ಸಾವಿರ ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಪಕ್ಕ ಮನೆ ಹೊಂದಿದವರು ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅವಕಾಶ ಇರುವುದಿಲ್ಲ.
ಆದರೆ ಈ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲಾಗಿದೆ. ಆದಾಯ ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ಉದ್ಯೋಗಿಗಳು ಸೇರಿದಂತೆ ನಿಯಮ ಮೀರಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರನ್ನು ಪತ್ತೆ ಹಚ್ಚಿ ದಂಡ ವಿಧಿಸಲು ಸರ್ಕಾರ ತೀರ್ಮಾನಿಸಿದೆ. ಅವರು ರೇಷನ್ ಕಾರ್ಡ್ ಪಡೆದುಕೊಂಡ ದಿನದಿಂದ ನಿರಂತರ ಪಡಿತರ ಪಡೆದಿದ್ದಾರೆಂದು ಲೆಕ್ಕಾಚಾರ ಮಾಡಿ ಕೆಜಿಗೆ 34 ರೂ. ದರದಲ್ಲಿ ದಂಡ ವಸೂಲಿ ಮಾಡಲಾಗುವುದು ಎನ್ನಲಾಗಿದೆ.