ಮಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಸಾಮೆತ್ತಡ್ಕದ ನಿವಾಸಿ 47 ವರ್ಷದ ಮಹಿಳೆ ನೀಡಿದ ದೂರಿನಲ್ಲೇನಿದೆ?
ಕಳೆದ ವರ್ಷ 2023ರ ಜೂನ್ತಿಂಗಳಲ್ಲಿ ಬೆಂಗಳೂರಿನ PAI VISTA ಹೋಟೆಲ್ ಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದರು. ಆ ಬಳಿಕ ಬ್ಲಾಕ್ ಮೇಲ್ ಮಾಡಿಕೊಂಡು ಅವರಿರುವ ಪ್ರದೇಶಕ್ಕೆ ಕರೆಸಿಕೊಳ್ಳುತ್ತಿದ್ದರು ಎಂದು ಮಹಿಳೆ ದೂರಿದ್ದಾರೆ.
ತನಗೆ ಹಾಗೂ ತನ್ನ ಪುತ್ರಿಗೆ ಜೀವನ ಪೂರ್ತಿ ಯಾವುದೇ ಕುಂದು ಕೊರತೆಯಾಗದಂತೆ ನೋಡಿಕೊಳ್ಳುವುದಾಗಿ ನಂಬಿಸಿ ನನ್ನನ್ನು ದೈಹಿಕ ಹಾಗೂ ಮಾನಸಿಕವಾಗಿ ಬಳಸಿಕೊಳ್ಳುತ್ತಿದ್ದರು.
ಅವರೊಂದಿಗೆ ಇದ್ದ ಕ್ಷಣಗಳ ಛಾಯಾ ಚಿತ್ರ, ಸೆಲ್ವಿ, ಆಡಿಯೋ, ವಿಡಿಯೋಗಳು ಇದೆಯೆಂದು ಹೇಳಿಕೊಂಡು ಬೆದರಿಸಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳುತ್ತಿದ್ದರು ಎಂದು ಸಂತ್ರಸ್ತೆ ಎನ್ನಲಾದ ಮಹಿಳೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆದರೆ 2024ರ ಲೋಕಸಭಾ ಚುನಾವಣೆಯ ಬಳಿಕ ಮಾತುಕತೆ ಕಡಿಮೆ ಮಾಡಿದ್ದು, ಭಯಗೊಂಡು ನಾನು ಪುತ್ತೂರಿಗೆ ವಾಸ ಬದಲಾವಣೆ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ವರಮಾನವಿಲ್ಲದೆ ಬಾಡಿಗೆ ಉದ್ಯೋಗ ಹಾಗೂ ಮನೆಯಲ್ಲಿದ್ದುಕೊಂಡು ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಾಮೆತ್ತಡ್ಕ ನಿವಾಸಿ 47 ವರ್ಷದ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ 5.5.45/2024 03 IPC 1860 (U/s- 417,354(a), 506 ಸೆಕ್ಷನ್ ನ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.