ಉಳಿದ ಸ್ನೇಹಿತರು ಅವನನ್ನು ಹೇಗೆ ಹೊರಗೆ ಕರೆತಂದರು ಎಂಬುದೇ ಮಂಜುಮ್ಮೇಲ್ ಬಾಯ್ಸ್ ಸಿನಿಮಾದ ಕತೆ. 2006ರಲ್ಲಿ ನಡೆದ ಈ ಘಟನೆಯನ್ನು ಆಧರಿಸಿ ಈ ಚಿತ್ರವನ್ನು ನಿರ್ಮಿಸಲಾಯಿತು ಮತ್ತು ಸಿಕ್ಕಾಪಟ್ಟೆ ಹಿಟ್ ಕೂಡ ಆಯಿತು. ಇದೇ ಸಿನಿಮಾದಲ್ಲಿ ನಡೆದಿರುವಂತೆಯೇ ಇದೀಗ ತುಮಕೂರಿನ ಯುವತಿಯೊಬ್ಬಳು ಸಾವನ್ನೇ ಗೆದ್ದು ಬಂದಿದ್ದಾಳೆ.
ನಿನ್ನೆ (ಅ.27) ತುಮಕೂರು ನಗರದ ಸಮೀಪದ ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿರುವ ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಹಂಸ (20) ಕೆಳಕ್ಕೆ ಬಿದ್ದು ಕಾಣೆಯಾಗಿದ್ದಳು. ಸಂಜೆಯಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಪಾಯಕ್ಕೆ ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿತ್ತು. ಅಲ್ಲದೆ, ಒಂದು ಹಂತದಲ್ಲಿ ಹಂಸ ಸತ್ತೇ ಹೋಗಿದ್ದಾಳೆ ಎಂದು ಭಾವಿಸಲಾಗಿತ್ತು. ಆದರೆ, ಅದೃಷ್ಟವಶಾತ್ ಹಂಸ ಬದುಕಿದ್ದಾಳೆ. ಪೊಟರೆಯಲ್ಲಿ ಸಿಲುಕಿಕೊಂಡಿದ್ದ ಆಕೆಯನ್ನು ಇದೀಗ ರಕ್ಷಣೆ ಮಾಡಲಾಗಿದೆ.
ಗುಬ್ಬಿ ತಾಲೂಕಿನ ಶಿವಪುರದ ಸೋಮನಾಥ್ ಎಂಬುವವರ ಪುತ್ರಿ ಹಂಸ ಸ್ನೇಹಿತರೊಂದಿಗೆ ಮೈದಾಳ ಕೆರೆ ನೋಡಲು ತೆರಳಿದ್ದರು. ಈ ವೇಳೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು.
ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ನಿನ್ನೆ ಸಂಜೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ರಾತ್ರಿಯಾದರೂ ಆಕೆ ಪತ್ತೆಯಾಗಲಿಲ್ಲ. ಕೆರೆ ಕೋಡಿ ನೀರನ್ನು ಬೇರೆಡೆಗೆ ಡೈವರ್ಟ್ ಮಾಡಿ ಕಾರ್ಯಾಚರಣೆ ಆರಂಭಿಸಿದ್ದರು. ಸತತ 12 ಗಂಟೆಗಳ ಕಾರ್ಯಾಚರಣೆ ಬಳಿಕ ಕೊನೆಗೂ ಹಂಸ ಬದುಕುಳಿದಿದ್ದಾಳೆ. ಹಂಸ ಸಾವನ್ನೆ ಗೆದ್ದು ಬಂದಿದ್ದಾಳೆ. ಈ ಒಂದು ಘಟನೆ ಮಂಜುಮ್ಮೇಲ್ ಬಾಯ್ಸ್ ಸಿನಿಮಾ ಘಟನೆಯನ್ನು ನೆನಪಿಸಿದೆ.