BREAKING : ಮಂಗಳೂರು ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!


ಮಂಗಳೂರು : ಕಳೆದ ಎರಡು ವರ್ಷಗಳ ಹಿಂದೆ ಫ್ಯಾಕ್ಟರಿ ಒಂದರಲ್ಲಿ 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಉತ್ತರಭಾರತ ಮೂಲದವರಾದ ಆರೋಪಿಗಳಾದ ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿಗೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.


2021ರ ನವೆಂಬರ್ 21ರಂದು ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿ ಅತ್ಯಾಚಾರ ಎಸಗಿದ್ದಲ್ಲದೆ ಬಳಿಕ ಕೊಲೆ ಮಾಡಲಾಗಿತ್ತು.

ಹೊರ ರಾಜ್ಯದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ನವೆಂಬರ್ 21 ರಂದು ಟೈಲ್ಸ್ ಫ್ಯಾಕ್ಟರಿಯಲ್ಲಿ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದರು. ಬಳಿಕ ಫ್ಯಾಕ್ಟರಿ ಒಳಗಡೆ ಇದ್ದ ಚರಂಡಿಯಲ್ಲಿ ಬಾಲಕಿ ಮೃತದೇಹ ಎಸೆದಿದ್ದರು. ಮೂವರು ಆರೋಪಿಗಳೂ ಟೈಲ್ಸ್ ಫ್ಯಾಕ್ಟರಿ ಸಿಬ್ಬಂದಿಯಾಗಿದ್ದರು. ಆರೋಪಿಗಳ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಫೋಕ್ಸೊ ಕಾಯ್ದೆ ಮತ್ತು ಐಪಿಸಿ 302 ಅಡಿ ಪ್ರಕರಣ ದಾಖಲಾಗಿತ್ತು.