ಡಾ.ಹಾಜಿ.ಎಸ್ ಅಬೂಬಕ್ಕರ್ ಆರ್ಲಪದವು ಇವರಿಗೆ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿ




ಮಂಗಳೂರು: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಕರ್ನಾಟಕದ 77ನೇ ಕನ್ನಡ ರಾಜ್ಯೋತ್ಸವದ ಸುಸಂದರ್ಭದಲ್ಲಿ ಕೊಡ ಮಾಡುವ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಗೆ ಗಡಿನಾಡ ಸಾಧಕ ಡಾ. ಹಾಜಿ ಎಸ್ ಅಬೂಬಕರ್ ಆರ್ಲಪದವು ಆಯ್ಕೆಯಾಗಿದ್ದಾರೆ. 77ನೇ ವರ್ಷದ ಕನ್ನಡ ರಾಜ್ಯೋತ್ಸವ ದ ಪ್ರಯುಕ್ತ ಕನ್ನಡ ನಾಡು ನುಡಿ ಕಲೆ ಸಾಹಿತ್ಯ ಸಂಘಟನೆ ಜಾನಪದ ಸಂಸ್ಕೃತಿ ಸಮಾಜ ಸೇವೆ ಹೀಗೆ ವಿವಿಧ ಆಯಾಮಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಇವರು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳಾಗಿ ಸುಮಾರು 160ಕ್ಕಿಂತಲೂ ಮಿಕ್ಕಿದ ಪ್ರಶಸ್ತಿ ಸನ್ಮಾನಗಳಿಗೆ ಭಾಜನರಾದವರಾಗಿರುತ್ತಾರೆ ಇವರಿಗೆ ಡಿಸೆಂಬರ್ ಒಂದರಂದು ದಾವಣಗೆರೆಯಲ್ಲಿ ನಡೆಯಲಿರುವ ಮಹಾಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಕೆ ಎಚ್ ಮಂಜುನಾಥ್ ಹೇಳಿಕೆಯಲ್ಲಿ ತಿಳಿಸಿರುತ್ತಾರೆ