ಮಂಗಳೂರು: ಮಳಲಿ ಮಸೀದಿಯ ಜಮೀನಿನ ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗ ಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ.
ಈ ಹಿಂದೆ ಮಸೀದಿ ಇರುವ ಜಾಗದ ಆರ್‌ಟಿಸಿಯ ಕಾಲಂ 9ರಲ್ಲಿ ಕಂದಾಯ ಭೂಮಿ ಎಂದು ಉಲ್ಲೇಖೀಸಲಾಗಿತ್ತು.
ಆದರೆ ಇತ್ತೀಚೆಗೆ ರಾಜ್ಯದ ಹಲವೆಡೆ ಉಂಟಾಗಿರುವ ವಕ್ಫ್ ವಿವಾದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿ ಮಳಲಿ ಮಸೀದಿ ಬಗ್ಗೆಯೂ ಅರ್ಜಿ ಸಲ್ಲಿಸಲಾಗಿತ್ತು.ಈ ಹಿಂದಿನ ದಾಖಲೆ ಬದಲಾಯಿಸಬಾರದು.
ಈ ಬಗ್ಗೆ ಸಿವಿಲ್ ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ಆಗುವವರೆಗೂ ಯಾವುದೇ ಪ್ರಕ್ರಿಯೆ ನಡೆಸಬಾರದು ಎಂದು ವಿಹಿಂಪ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.