ಪುತ್ತೂರು: ಸರ್ಕಾರಿ ಬಸ್ಸು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತ್ಯು | ಮುರ ನಿವಾಸಿ ಅಬ್ದುಲ್ಲಾ ಕುಂಞಿ ಮೃತಪಟ್ಟ ವ್ಯಕ್ತಿ

ಪುತ್ತೂರು: ಸರ್ಕಾರಿ ಬಸ್ಸು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಮುರ ಎಂಬಲ್ಲಿ ಇದೀಗ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ವಾಗಿದ್ದರೂ ಇದೀಗ ಮೃತಪಟ್ಟಿದ್ದಾರೆ ಎನ್ನಲಾಗಿದ್ದು ಮೃತ ವ್ಯಕ್ತಿಯನ್ನು ಮುರ ನಿವಾಸಿ ಅಬ್ದುಲ್ಲಾ ಕುಂಞಿ  - ಅದ್ಲಂಞಿ(68) ಎಂದು ಗುರುತಿಸಲಾಗಿದೆ.



-ಮುರ ಜಂಕ್ಷನ್ ನಿಂದ ತನ್ನ ಮನೆ ಕಡೆ ತೆರಳುತ್ತಿದ್ದ ಬೈಕ್ ಸವಾರನಿಗೆ ಮಂಗಳೂರುನಿಂದ ಪುತ್ತೂರು ಕಡೆ ಸಂಚರಿಸುತ್ತಿದ್ದ ಸರ್ಕಾರಿ ಬಸ್ಸು ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಇದೀಗ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ