ಹಾಸನ : ಸಮಾವೇಶಕ್ಕೆ ಹೋಗುತ್ತಿದ್ದ ಸಚಿವ ಕೆ.ಹೆಚ್ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದೆ. ಹೆಚ್ಚಿನ ಅನಾಹುತ ಆಗಿಲ್ಲ ಎಂಬುದು ಸದ್ಯಕ್ಕೆ ತಿಳಿದು ಬಂದಿದೆ.
ಎದುರುಗಡೆಯಿಂದ ಬರುತ್ತಿದ್ದ ಕಾರು ಸಚಿವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಆಗಿಲ್ಲ.
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ಈ ಘಟನೆ ನಡೆದಿದೆ. ಮುನಿಯಪ್ಪ ಅವರಿದ್ದ ಕಾರಿಗೆ ಸಣ್ಣಪುಟ್ಟ ಡ್ಯಾಮೇಜ್ ಆಗಿದ್ದು, ಅವರು ಬೇರೆ ವಾಹನದಲ್ಲಿ ಹಾಸನ ಸಮಾವೇಶಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.