ಬೆಳಗಾವಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ಡಿ.27ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ.
ನಾಳೆ ಡಿ.27ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶ ಶತಮಾನೋತ್ಸವ ಕಾರ್ಯಕ್ರಮ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರು ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದರು. ಆದರೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ದಿಢೀರ್ ರದ್ದುಗೊಳಿಸಲಾಗಿದೆ. ಕಾಂಗ್ರೆಸ್ ನಾಯಕರು ದೆಹಲಿಗೆ ದೌಡಾಯಿಸಿ, ಮಾಜಿ ಪ್ರಧಾನಿ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
ಬೆಳಗಾವಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
1924 ರಲ್ಲಿ ಗಾಂಧಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಇದರ ಶತಮಾನೋತ್ಸವದ ಅಂಗವಾಗಿ ಕಾಂಗ್ರೆಸ್ ಡಿ.26-27 ರಂದು ಗಾಂಧಿ ಭಾರತ ಎಂಬ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದಿಯಾಗಿ ಕಾಂಗ್ರೆಸ್ ನ ಹೈಕಮಾಂಡ್ ನಾಯಕರು ಬೆಳಗಾವಿಗೆ ಆಗಮಿಸಿದ್ದರು.
ಆದರೆ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ. ಕಾರ್ಯಕ್ರಮ ರದ್ದುಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಸಹ ದೆಹಲಿಗೆ ತೆರಳಿ ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.