ಮಂಗಳೂರು | ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ತಾತ್ಕಲಿಕ ಆಯ್ಕೆ ಪಟ್ಟಿ ಪ್ರಕಟ Village Accountant Post


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 50 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು 1:3 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ವೆಬ್ ಸೈಟ್‌ನಲ್ಲಿ (www.dk.nic.in) ನಲ್ಲಿ ಪ್ರಕಟಿಸಲಾಗಿದೆ.

ಈ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳು ಮೂಲ ದಾಖಲೆ ಪರಿಶೀಲನೆಗೆ 2025ರ ಜ.7 ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದ ಎರಡನೇ ಮಹಡಿಯಲ್ಲಿ ಹಾಜರಾಗಲು ಸೂಚಿಸಲಾಗಿದೆ.

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿತ್ತು. ಜಿಲ್ಲೆಯಲ್ಲಿ ಖಾಲಿ ಇರುವ 50 ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಚೇರಿಯ ಆಡಳಿತ ಶಾಖೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಯವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಸಂಪರ್ಕ: 0824-2220584/2220590