ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ವೀರಕಂಬ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ದೂರಿನ ಆಧಾರದಲ್ಲಿ ಈಗಾಗಲೇ ಶಿಕ್ಷಕನ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚಿಗೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೆ ಇವೆ. ಪೊಲೀಸರು ಎಷ್ಟೇ ಕಠಿಣ ಕ್ರಮ ತೆಗೆದುಕೊಂಡರು ಸಹ ಇಂತಹ ದುಷ್ಕೃತ್ಯಗಳು ನಿಲ್ಲುತ್ತಿಲ್ಲ.
ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದ ಈ ಶಿಕ್ಷಕ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕೂಡ ಪಡೆದಿದ್ದ ಎನ್ನಲಾಗಿದೆ.
ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ವೀರಕಂಬ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಬಗ್ಗೆ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದು, ಈ ಸಂಬಂಧ ಈಗಾಗಲೇ ಶಿಕ್ಷಕನ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದ ಈ ಶಿಕ್ಷಕ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕೂಡ ಪಡೆದಿದ್ದ ಎನ್ನಲಾಗಿದೆ. ಶಾಲೆಯ 10ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಇತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದ್ದು,ಜಿಲ್ಲಾ ಮಕ್ಕಳ ರಕ್ಷಣ ಘಟಕದಿಂದ ತನಿಖೆ ಕೈಗೊಳ್ಳಲಾಗಿದೆ.
ಅಲ್ಲದೇ ಇದೇ ಶಿಕ್ಷಕ ಈ ಹಿಂದೆಯೂ ಕರೋಪಾಡಿ ಗ್ರಾಮದಲ್ಲಿ ಶಿಕ್ಷಕನಾಗಿದ್ದಾಗ ಠಾಣೆಗೆ ದೂರು ನೀಡಲಾಗಿತ್ತು. ಆಮೇಲೆ ಈತನನ್ನು ಬೇರೆಡೆಗೆ ವರ್ಗಾಯಿಸಿ, ವಿಷಯ ಮುಚ್ಚಿ ಹಾಕಲಾಗಿತ್ತು ಎಂಬ ಸುದ್ದಿ ಕೇಳಿ ಬರುತ್ತಿದೆ.