Bengaluru crime: ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ; ಆರೋಪಿಯ ಬಂಧನ! ಹಸುವಿನ ಜೀವದಷ್ಟು ಆ ಪುಟ್ಟ ಬಾಲಕಿಯ ಜೀವಕ್ಕೆ ಬೆಲೆ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ...!!?

ಬೆಂಗಳೂರು: ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದ್ದು, ಆರು ವರ್ಷದ ಬಾಲಕಿ ಮೇಲೆ ಲೈಂಗಿ ದೌರ್ಜನ್ಯ ಎಸಗಿ ಕೊಲೆ ಮಾಡಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆರನ ವಿಚಾರಣೆ ನಡೆಸುತ್ತಿದ್ದಾರೆ.



ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (Sexual assault) ಎಸಗಿ ಕೊಲೆ (Murder) ಮಾಡಿರುವ ದಾರುಣ ಘಟನೆ ಬೆಂಗಳೂರಿನ (Bengaluru) ರಾಮಮೂರ್ತಿ ನಗರದಲ್ಲಿ ನಡೆದಿದೆ. ಸೋಮವಾರ ರಾತ್ರಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಲಾಗಿದೆ. ಬಿಹಾರ ಮೂಲದ ಅಭಿಷೇಕ್ ಎಂಬಾತ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಆರೋಪಿಯನ್ನು (Accused) ಬಂಧಿಸಿರುವ (Arrest) ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿದ್ದು, ನೇಪಾಳ ಮೂಲದ ಕುಟುಂಬಕ್ಕೆ ಸೇರಿದ ಬಾಲಕಿಗೆ ಆರು ವರ್ಷ ವಯಸ್ಸು ಎಂದು ತಿಳಿದುಬಂದಿದೆ. ಮೃತ ಬಾಲಕಿ ತಂದೆ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.



ಆರೋಪಿ ಅಭಿಷೇಕ್ ಕೃತ್ಯ ಎಸಗಿ ಪರಾರಿಯಾಗಲು ಯತ್ನಿಸುತ್ತಿದ್ದ. ಈ ವೇಳೆ ಆರೋಪಿಯನ್ನು ಹಿಡಿದ ಸ್ಥಳೀಯರು ಧರ್ಮದೇಟು ಕೊಟ್ಟಿದ್ದಾರೆ. ನಂತರ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಸ್ಥಳೀಯರಿಂದ ಆರೋಪಿಯನ್ನು ರಕ್ಷಿಸಿ ಬಂಧಿಸಿದ್ದಾರೆ. ಸ್ಥಳದಲ್ಲಿ ಹೆಚ್ಚು ಜನರು ಸೇರಿದ್ದರಿಂದ ಅವರನ್ನು ಚದುರಿಸಲು ಲಾಠಿ ಬೀಸಿದ್ದಾರೆ. ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಹಸುವಿನ ಜೀವದಷ್ಟು ಆ ಪುಟ್ಟ ಮಗುವಿನ ಜೀವಕ್ಕೆ ಬೆಲೆ ಇಲ್ಲವೇ..!!?

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಗಳು ರಾಜಕೀಯ ನೇತಾರರ ಪರಿಹಾರ ಘೋಷಣೆಗಳು ಕೇಳಿ ಬರುತ್ತಿದೆ. 

ಆದರೆ ಪಕ್ಕದ ಜಿಲ್ಲೆಯಲ್ಲಿ ನಡೆದ ಆರು ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜಕೀಯ ವ್ಯಕ್ತಿಗಳ ಯಾವುದೇ ಹೇಳಿಕೆಗಳಾಗಲಿ ಕುಟುಂಬಕ್ಕೆ ಪರಿಹಾರ ಘೋಷಣೆಯಾಗಲಿ ನೀಡದೇ ಇರುವುದು ಇಲ್ಲಿನ ಜಾತಿ ರಾಜಕಾರಣವನ್ನು ಎತ್ತಿ ತೋರಿಸು ಅಂತಿದೆ ಮತ್ತು ಹಸುವಿನ ಜೀವ ದಷ್ಟು ಆ ಪುಟ್ಟ ಮಗುವಿನ ಜೀವಕ್ಕೆ ಬೆಲೆ ಇಲ್ಲವೇ ಎಂದು ಹಲವಾರು ಬರಲು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗ ತೊಡಗಿದೆ