BREAKING : ಮಂಗಳೂರಿನ 2 ಪ್ರತಿಷ್ಟಿತ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಮಂಗಳೂರು: ಉಡುಪಿಯ ಶಾಲೆಗೆ ಬಾಂಬ್‌ ಬೆದರಿಕೆ ಬಂದ ಬೆನ್ನಲ್ಲೇ ಮಂಗಳೂರಿನ ಎರಡು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಬಗ್ಗೆ ವರದಿಯಾಗಿದೆ.
ಮಂಗಳೂರಿನ ಎರಡು ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಕಿಡಿಗೇಡಿಗಳು ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಕಳಿಸಿದ್ದಾರೆ.



ಮಂಗಳೂರು ಪೊಲೀಸರು ಸ್ಥಳಕ್ಕೆ ತೆರಳಿ ಶಾಲೆಯಲ್ಲಿ ಶೋಧಕಾರ್ಯ ನಡೆಸಿದ್ದಾರೆ.


ಪಾಂಡೇಶ್ವರ ಹಾಗು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್‌ ಬಂದಿದೆ. ಶಾಲೆಯಲ್ಲಿ ಬಾಂಬ್ ಸ್ಕ್ವಾಡ್ ಯುನಿಟ್ ನಿಂದ ಶೋಧಕಾರ್ಯ ನಡೆಸಲಾಗಿದೆ.


ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.