ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ತಮ್ಮ ಲಿಬರಲ್ ಪಕ್ಷದ ನಾಯಕ ಸ್ಥಾನಕ್ಕೆ ಹಾಗೂ ಪ್ರಧಾನಿಯ ಹುದ್ದೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಸುಮಾರು 9 ವರ್ಷಗಳ ಆಡಳಿತ ನಡೆಸಿದ ಟ್ರುಡೊ 2015 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು.
ನಮ್ಮ ಲಿಬರಲ್ ಪಕ್ಷ ತನ್ನ ಹೊಸ ನಾಯಕನನ್ನು ಆಯ್ಕೆ ಮಾಡಿದ ನಂತರ ನಾನು ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಲು ಉದ್ದೇಶಿಸಿದ್ದೇನೆ ಎಂದು 53 ವರ್ಷದ ಜಸ್ಟಿನ್ ಟ್ರುಡೊ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜಸ್ಟಿನ್ ಟ್ರುಡೊ ಅವರು 2015 ರಲ್ಲಿ ಅಧಿಕಾರಕ್ಕೆ ಬಂದಿದ್ದು, ಒಂದು ದಶಕದ ಕನ್ಸರ್ವೇಟಿವ್ ಪಕ್ಷದ ಆಡಳಿತವನ್ನು ಕೊನೆಗೊಳಿಸಿದ್ದರು. ಆಹಾರ ಮತ್ತು ವಸತಿ ವೆಚ್ಚಗಳು ಗಗನಕ್ಕೇರುತ್ತಿರುವ ವೇಳೆ, ವಲಸೆಯ ತೀವ್ರ ಏರಿಕೆಯಂತಹ ವಿಷಯಗಳ ಬಗ್ಗೆ ಕೆನಡದಲ್ಲಿ ಮತದಾರರ ಅಸಮಾಧಾನದಿಂದ ತಲೆದೋರಿದೆ.