ದಕ್ಷಿಣ ಕನ್ನಡ, ಜಿಲ್ಲಾ ಸಾಹಿತ್ಯ ಸಮ್ಮೇಳನ ಪುಸ್ತಕ ಬಿಡುಗಡೆಗೆ ಆಹ್ವಾನ

ಮಂಗಳೂರು: ಪೆಬ್ರುವರಿ 21 ಮತ್ತು 22 ರಂದು ನಡೆಯಲಿರುವ ದ.ಕ ಜಿಲ್ಲಾ ೨೭ ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಅವಕಾಶ ಕಲ್ಪಿಸಿದ್ದು ಆಸಕ್ತ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. 

ಸಮ್ಮೇಳನವು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆಯಲಿದ್ದು ಯಾವುದೇ ಪ್ರಕಾರದ ಕನ್ನಡ ಪುಸ್ತಕಗಳ ಬಿಡುಗಡೆಗೆ ಅವಕಾಶವಿದೆ. ಆಸಕ್ತರು ವಿವರಗಳಿಗೆ ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಡಾ.ಧನಂಜಯ ಕುಂಬ್ಳೆ,  (ಸಂಪರ್ಕ 8310300875) ಇವರನ್ನು 22 .1.2025  ರ  ಮುಂಚಿತವಾಗಿ ಸಂಪರ್ಕಿಸಬಹುದು ಎಂದು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ್ ತಿಳಿಸಿದ್ದಾರೆ.