ಮಂಗಳೂರು: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆಯ ಕಸರತ್ತು ನಡೆಯುತ್ತಿದೆ. ಇದರ ನಡುವೆಯೇ ಜಿಲ್ಲಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯು ನಡೆಯುತ್ತಿದ್ದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಮರುನೇಮಕಗೊಂಡಿದ್ದಾರೆ.
ಹೌದು, ದ.ಕ.ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್ ಕುಂಪಲ ಪುನರಾಯ್ಕೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ಚುನಾವಣಾಧಿಕಾರಿ ರಾಜೇಶ್ ಕಾವೇರಿ, ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಂದಿನ 3 ವರ್ಷಗಳ ಅವಧಿಗೆ ಸತೀಶ್ ಕುಂಪಲ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ ಪ್ರಕಟಿಸಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣಕನ್ನಡದ ಸಂಸದರು, ಶಾಸಕರು, ರಾಜ್ಯ ಚುನಾವಣಾ ಅಧಿಕಾರಿಗಳು, ಜಿಲ್ಲಾ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.