ಡಿವೈಎಸ್‌ಪಿದೂರು ಕೊಡಲು ಬಂದ ಮಹಿಳೆ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದಾರೆ. ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿ ಸಿಕ್ಕಿಬಿದ್ದಾನೆ. ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯನ್ನು ಪುಸಲಾಯಿಸಿ ರಾಸಲೀಲೆ ನಡೆಸಿರುವ ದೃಶ್ಯ ಸೆರೆಯಾಗಿದೆ.
ವಿಡಿಯೋದಲ್ಲಿ ಸೆರೆಯಾಯ್ತು ದೃಶ್ಯ
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡುವ ಸಲುವಾಗಿ ಡಿವೈಎಸ್‌ಪಿ ಕಚೇರಿಗೆ ಬಂದಿದ್ದರು. ಮಾತುಕತೆ ನಡೆಸಲು ಡಿವೈಎಸ್‌ಪಿ ಕಚೇರಿಗೆ ಬಂದಾಗಲೇ ಆ ಮಹಿಳೆಯನ್ನು ಪುಸಲಾಯಿಸಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ರಾಸಲೀಲೆ ನಡೆಸಿದ್ದಾರೆ.
ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರಕ್ಷಣೆ ನೀಡುವವರೇ ಈ ರೀತಿ ಮಾಡಿದರೆ ಮುಂದೇನಾಗಬಹುದು ಎಂಬ ಪ್ರಶ್ನೆ ಮೂಡುತ್ತದೆ. ಈ ರೀತಿ ಘಟನೆಯಿಂದ ಇಡೀ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಈಗಾಗಲೇ ಈ ವಿಡಿಯೋ ವೈರಲ್ ಆಗುತ್ತಿದ್ದು ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂಬ ಕೂಗು ಕೇಳಿಬರುತ್ತಿದೆ. ರಕ್ಷಕರೇ ಭಕ್ಷಕರಾಗಿ ಬದಲಾದರೆ ಸಮಾಜವಾದರೂ ಹೇಗೆ ಸುಧಾರಿಸಬೇಕು ಎಂಬ ಪ್ರಶ್ನೆಗಳು ಕೇಳಿಬರುತ್ತಿದೆ.
ಸಾಕಷ್ಟು ಜನ ಈಗಾಗಲೇ ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಈ ರೀತಿ ತಪ್ಪುಗಳು ಆಗದಂತೆ ತಡೆಗಟ್ಟಬೇಕು. ಆ ಮಹಿಳೆಗೆ ನ್ಯಾಯ ಸಿಗಬೇಕು ಎಂಬ ಮಾತುಗಳು ಕೇಳಿಬರುತ್ತದೆ. ಗೃಹ ಇಲಾಖೆ ಎಷ್ಟು ಬಿಗಿಯಾಗಿದೆ ನೀವೇ ನೋಡಿ ಎಂದು ಅಣಕವಾಡುವಂತಾಗಿದೆ. ಸಹಜವಾಗಿ ಈ ರೀತಿ ಘಟನೆಗಳು ನಡೆದಾಗ ಇಂತಹ ಪ್ರಶ್ನೆಗಳು ಉದ್ಭವವಾಗುತ್ತದೆ. ಈ ವಿಡಿಯೋ ವೈರಲ್ ಆಗಿದ್ದು, ಜಿಲ್ಲಾ ಪೊಲೀಸ್ ಉಸ್ತುವಾರಿ ವಹಿಸಿ ತನಿಖೆಗೆ ಆದೇಶಿಸಿದ್ದಾರೆ.