ರಾಜ್ಯಾದ್ಯಂತ ಮಾ.2ರಿಂದ ರಂಝಾನ್ ಉಪವಾಸ ಆರಂಭ : ಮೌಲಾನಾ ಮಕ್ಸೂದ್ ಇಮ್ರಾನ್

ಬೆಂಗಳೂರು : ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾ.2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ತಿಳಿಸಿದರು.


ರಾಜ್ಯ ವಕ್ಫ್ ಬೋರ್ಡ್‌ನ ಕೇಂದ್ರ ಕಚೇರಿ(ದಾರುಲ್ ಔಕಾಫ್)ಯಲ್ಲಿ ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ ಚಂದ್ರ ದರ್ಶನದ ಬಗ್ಗೆ ಲಭ್ಯವಾದ ಮಾಹಿತಿ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.