
ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ 31 ವರ್ಷದ ಪಾಟಿದಾರ್ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ಫಾಫ್ ಡುಪ್ಲೆಸಿಸ್ ಕಾಣಿಸಿಕೊಂಡಿದ್ದರು. 2022 ರಿಂದ 2024 ರವರೆಗೆ ಡುಪ್ಲೆಸಿಸ್ ಮುಂದಾಳತ್ವದಲ್ಲಿ ಆರ್ಸಿಬಿ ಕಣಕ್ಕಿಳಿದಿತ್ತು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು.

ಇನ್ನು ಮೆಗಾ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತವಾಗಿತ್ತು. ಹೀಗಾಗಿ ವಿರಾಟ್ ಕೊಹ್ಲಿ ನಾಯಕರಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಕೊಹ್ಲಿ ಬದಲಿಗೆ ರಜತ್ ಪಾಟಿದಾರ್ ಅವರನ್ನು ನಾಯಕರಾಗಿ ನೇಮಕ ಮಾಡಲಾಗಿದೆ.

ಕಿಂಗ್ ಕೊಹ್ಲಿ ಆರ್ಸಿಬಿ ತಂಡದ ಚುಕ್ಕಾಣಿ ಹಿಡಿಯುತ್ತಿರುವುದು ಇದೇ ಮೊದಲೇನಲ್ಲ. 2013 ರಿಂದ 2021 ರವರೆಗೆ ವಿರಾಟ್ 143 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದಾರೆ. ಈ ವೇಳೆ ಆರ್ಸಿಬಿ ತಂಡ 66 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ.

ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಯ ಬಾರಿಗೆ ಫೈನಲ್ಗೆ ಪ್ರವೇಶಿಸಿದ್ದು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ. 2016 ರಲ್ಲಿ ಕಿಂಗ್ ಕೊಹ್ಲಿ ಸಾರಥ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಆರ್ಸಿಬಿ ಫೈನಲ್ ಆಡಿತ್ತು. ಆದರೆ ಅಂತಿಮ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೇವಲ 8 ರನ್ಗಳಿಂದ ಮುಗ್ಗರಿಸಿ ಟ್ರೋಫಿ ಎತ್ತಿ ಹಿಡಿಯುವ ಅವಕಾಶ ಕೈ ತಪ್ಪಿಸಿಕೊಂಡಿತು.

ಇನ್ನು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್ಸಿಬಿ ತಂಡವು ಮೂರು ಬಾರಿ ಪ್ಲೇಆಫ್ ಆಡಿದೆ. ಇದೀಗ ಮೂರು ಸೀಸನ್ಗಳ ಬಳಿಕ ಮತ್ತೆ ಕ್ಯಾಪ್ಟನ್ ಆಗಿ ಕಿಂಗ್ ಕೊಹ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇತ್ತ ವಿರಾಟ್ ಕೊಹ್ಲಿಗೆ ನಾಯಕತ್ವ ಸಿಗುತ್ತಿದ್ದಂತೆ ಈ ಸಲ ಕಪ್ ನಮ್ದೆ ಎನ್ನುತ್ತಿದ್ದಾರೆ ಆರ್ಸಿಬಿ ಅಭಿಮಾನಿಗಳು.
