Karnataka Budget 2025-26: ವಕ್ಫ್‌ ಆಸ್ತಿ, ಮುಸ್ಲಿಂ ಸ್ಮಶಾನಗಳ ರಕ್ಷಣೆಗೆ 150 ಕೋಟಿ ರೂ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌


 Budget 2025-26: ಸಿಎಂ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ 2025-26 ನೇ ಸಾಲಿನ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ ಮಂಡನೆ ನಡೆಯುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಗಳು ಇದೆ.





ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣ, ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯ ಒದಗಿಸಲು 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್ನಲ್ಲಿ (Karnataka Budget 2025) ಘೋಷಣೆ ಮಾಡಿದರು.

ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ 500 ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ. ಜೊತೆಗೆ 150 ಎಕರೆ ಜಾಗವನ್ನು ಸಹ ಕಾಯ್ದಿರಿಸಿರುವುದಾಗಿ ಸಿಎಂ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

ಕನ್ನಡ ಸಿನಿಮಾಗಳಿಗಾಗಿ ವಿಶೇಷ ಒಟಿಟಿ ತರೋ ಬಗ್ಗೆ ಸರ್ಕಾರ ನಿರ್ಧಾರ, ಸಿನಿಮಾ ಕ್ಷೇತ್ರವನ್ನ ಕೈಗಾರಿಕಾ ನೀತಿಯಡಿ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಈ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾವಿದರಿಗೆ ನೀಡುತ್ತಿರುವ ಮಾಸಾಶನದ ಮೊತ್ತ ರೂ.2000ನ್ನು 2500 ರೂ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, ಶುಲ್ಕದಲ್ಲಿ ಶೇ.50ರಷ್ಟು ಮರುಪಾವತಿ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

ಕೆಇಎ ಮೂಲಕ ವೃತ್ತಿಪರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ ಸೀಮಿತವಾಗಿದೆ. ಜೊತೆಗೆ ಶುಲ್ಕದಲ್ಲಿ ಶೇ.50 ರಷ್ಟು ಮರು ಪಾವತಿ ಮಾಡಲಾಗುವುದು. ಜೈನ, ಬೌದ್ಧ ಹಾಗೂ ಸಿಖ್‌ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು. ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲು. ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷ ದಿಂದ 30 ಲಕ್ಷಕ್ಕೆ ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.